ಬೆಂಗಳೂರು: ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ರೌಡಿ ಶೀಟರ್ ಮೇಲೆ ಪೊಲೀಸರು ಶೂಟೌಟ್ ನಡೆಸಿದ ಘಟನೆ ಕೆಂಗೇರಿ ಸಮೀಪ ವಿಶ್ವೇಶ್ವರ ಲೇಜೌಟ್ ಬಳಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ರೌಡಿ ಶೀಟರ್ ನ್ನು ಅರುಣ್ ಎಂದು ಗುರುತಿಸಲಾಗಿದೆ. ನಡೆದಿದ್ದು, ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಆ. 15 ರಂದು ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಪ್ರತಾಪ್ ಎಂಬಾತನನ್ನು ಆರೋಪಿ ಅರುಣ್ ಕೊಲೆ ಮಾಡಿದ್ದ. ಈ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಗೆ 3 ವಿಶೇಷ ತಂಡ ರಚನೆ ಮಾಡಲಾಗಿತ್ತು. ಇಂದು ಬೆಳಗ್ಗಿನ ಜಾವ
ಪಿಎಸ್ ಐ ಮಲ್ಲಿಕಾರ್ಜುನ್ ತಂಡ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ದಾಳಿ ನಡೆಸಿದ್ದ. ಈ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಅರುಣ್ನ ಎಡಗಾಲಿಗೆ ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್ ಅರುಣ್ ವಿರುದ್ಧ ಮೂರು ಕೊಲೆ ಪ್ರಕರಣಗಳ ದಾಖಲಾಗಿವೆ.