ಬೆಂಗಳೂರು: ಸರ್ಕಾರಿ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಏರಿಕೆಯಾಗುವ ಸಾಧ್ಯತೆಯಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆಯಿಂದ ಕಂಗೆಟ್ಟಿರುವ ಜನರಿಗೆ ಈಗ ಮತ್ತೊಂದು ಹೊಡೆತ ಬಿದ್ದಿದೆ.
ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರು ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ಪ್ರಯಾಣ ದರ ಏರಿಕೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದರು.
ಕಳೆದ ಮೂರು ತಿಂಗಳ ಹಿಂದೆಯೇ ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆ ನಿಗಮಗಳು ಪ್ರಯಾಣ ದರವನ್ನು ಶೇ.18ರಷ್ಟು ಏರಿಕೆ ಮಾಡಬೇಕೆಂದು ಪ್ರಸ್ತಾವ ಸಲ್ಲಿಸಿದ್ದವು. ಈಗ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ತಮ್ಮಣ್ಣ ತಿಳಿಸಿದರು.
ಕಡಿಮೆ ಪ್ರಯಾಣಿಕರು ಇರುವಂತಹ ಮತ್ತು ನಗರದಲ್ಲಿ ಹೆಚ್ಚಾಗಿರುವ ಬಸ್ ಗಳನ್ನು ಕಡಿತ ಮಾಡಲಾಗುವುದು. ಹಬ್ಬಗಳ ವೇಳೆ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಮಾಡಲಾಗುವುದು ಎಂದು ತಮ್ಮಣ್ಣ ಹೇಳಿದರು.