ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ನಡೆಸಲು ಹೈಕೋರ್ಟ್ ಒಪ್ಪಿಗೆ ನೀಡಿದೆ.
ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣದಲ್ಲಿ ಎಸಿಬಿ ದಾಖಲಿಸಿಕೊಂಡಿರುವ ಎಫ್ ಐಆರ್ ನ್ನು ರದ್ದುಗೊಳಿಸಬೇಕೆಂದು ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ಕೋರ್ಟ್, ಈ ತೀರ್ಪು ನೀಡಿದೆ.
ಸೋಮನಹಳ್ಳೀಯ ಬಗರ್ ಹುಕುಂ ಭೂಪ್ರದೇಶದ್ಲಲಿ 8 ಎಕರೆ ಜಾಗವನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪವು ಅಶೋಕ್ ಮೇಲಿದೆ. ಅಶೋಕ್ ಅವರು ಬೆಂಗಳೂರು ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಈ ಹಗರಣ ನಡೆದಿದೆ.