ಬೆಂಗಳೂರು: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯವಾಗಿ ರಜೆ ಮೇಲೆ ಕಳುಹಿಸಿರುವ ವಿರುದ್ಧ ಶುಕ್ರವಾರ ಗಂಗಾನಗರದ ಸಿಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದ ಅಲೋಕ್ ವರ್ಮಾರನ್ನು ವಜಾಗೊಳಿಸಲಾಗಿದೆ. ಪ್ರಧಾನಿ ಮೋದಿ ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಬೃಹತ್ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದರು.
ಸಿಬಿಐ ನಿರ್ದೇಶಕರನ್ನು ಮರುನಿಯುಕ್ತಿಗೊಳಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.