ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಟಿಪ್ಪು ಜಯಂತಿಯನ್ನು ಕರ್ನಾಟಕದಲ್ಲಿ ಆಚರಣೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ವಿರೋಧ ವ್ಯಕ್ತಪಡಿಸಿದರೂ ಟಿಪ್ಪು ಜಯಂತಿ ಆಚರಣೆ ಮಾಡಲಾಗುತ್ತದೆ. ಬಿಜೆಪಿ ಪಕ್ಷದವರು ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ಕೋಮು ಸೌಹಾರ್ಧ ಕದಡುವ ಕೆಲಸ ನಡೆಯುತ್ತಿದೆ ಎಂದರು.
ಇನ್ನೂ ಕಾರ್ಯಕ್ರಮಕ್ಕೆ ಯಾವುದೇ ಧಕ್ಕೆ ಬರದಂತೆ ನಡೆಯಲು ಮುಂಜಾಗೃತ ಕ್ರಮವನ್ನು ಕೈಗೊಳ್ಳುತ್ತಿದ್ದು ಈ ಸಂಬಂಧ ಸೋಮವಾರ ಪೊಲೀಸ್ ವರಿಷ್ಠರ ಜತೆ ಸಭೆ ನಡೆಸಲಿದ್ದೇವೆ ಎಂದು.