ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ)ದ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಸಹೋದ್ಯೋಗಿಯೊಬ್ಬರು ಕಚೇರಿಯಲ್ಲೇ ಮಚ್ಚಿನಿಂದ ಹಲ್ಲೆ ಮಾಡಿರುವಂತಹ ಘಟನೆಯು ಸೋಮವಾರ ನಡೆದಿದೆ.
ಜಯಲಕ್ಷ್ಮೀ ಎಂಬವರೇ ಹಲ್ಲೆಗೊಳಗಾದವರು. ಇವರ ಮೇಲೆ ನಟರಾಜ್ ಎಂಬಾತ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ವರದಿಗಳು ಹೇಳಿವೆ.
ಇಂದು ಬೆಳಗ್ಗೆ 11 ಗಂಟೆ ವೇಳೆ ಈ ಘಟನೆ ನಡೆದಿದ್ದು, ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧಾನಸೌಧ ಪೊಲೀಸರು ಈ ಬಗ್ಗೆ ಆರೋಪಿಯನ್ನು ವಿಚಾರಣೆಗೆ ತೆಗೆದುಕೊಂಡಿದ್ದಾರೆ.
ಜಯಲಕ್ಷ್ಮೀ ಅವರೊಂದಿಗೆ ಜಗಳ ತೆಗೆದ ನಟರಾಜ್ ಕತ್ತಿನ ಭಾಗಕ್ಕೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.