ಬೆಂಗಳೂರು: ಸೋಮವಾರ ಬೆಳಿಗ್ಗೆ ವಿಧಿವಶರಾದ ಕೇಂದ್ರ ಸಚಿವ, ಬಿಜೆಪಿ ನಾಯಕ ಅನಂತಕುಮಾರ್ ಅವರು ಅಂತ್ಯಕ್ರಿಯೆಯು ಮಂಗಳವಾರ ಸರ್ಕಾರಿ ಸಕಲ ಗೌರವದೊಂದಿಗೆ ಸ್ಮಾರ್ತ ಋಗ್ವೇದೀಯ ಆಶ್ವಲಾಯನ ಸೂತ್ರದ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಸೇನಾ ಸಿಬ್ಬಂದಿ ಸರ್ಕಾರಿ ಗೌರವ ಸಲ್ಲಿಸಿದರು. ಸಹೋದರ ನಂದಕುಮಾರ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಸಿದರು.
ಬಿಜೆಪಿ ನಾಯಕ ಎಲ್. ಕೆ.ಅಡ್ವಾಣಿ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಪಿಯೂಶ್ ಗೋಯಲ್, ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಗಟ್ರೀಯ ಅಧ್ಯಕ್ಷ ಅಮಿತ್ ಶಾ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿಂದತೆ ಅನೇಕ ನಾಯಕರು ಆಂತ್ಯಸಂಸ್ಕಾರದ ವೇಳೆ ಉಪಸ್ಥಿತರಿದ್ದರು.