ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಬಜೆಟ್ ನಲ್ಲಿ ಘೋಷಿಸಿದ್ದ ಬಡವರ ಬಂಧು ಯೋಜನೆಗೆ ಯಶವಂತಪುರದ ಎಪಿಎಂಸಿಯಲ್ಲಿ ಗುರುವಾರ ಚಾಲನೆ ನೀಡಿದರು.
ಈ ಯೋಜನೆಯಡಿಯಲ್ಲಿ ಶೂನ್ಯ ಬಡ್ಡಿ ದರದಲ್ಲಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳು, ಮಹಿಳಾ ಸಹಕಾರಿ ಬ್ಯಾಂಕುಗಳು, ಪಟ್ಟಣ ಸಹಕಾರ ಬ್ಯಾಂಕುಗಳ ಮೂಲಕ ಅರ್ಹ ಫಲಾನುಭವಿಗಳಿಗೆ 2 ಸಾಔಇರದಿಂದ 10 ಸಾವಿರವನ್ನು ಸಾಲ ವಿತರಿಸಲಾಗುತ್ತದೆ.
ಬಿಬಿಎಂಪಿ, 10ಮಹಾನಗರ ಪಾಲಿಕೆ ಮತ್ತು ಉಳಿದೆಲ್ಲ ಜಿಲ್ಲಾ ಕೇಂದ್ರದ ಸಣ್ಣ ವ್ಯಾಪಾರಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.