News Kannada
Thursday, September 29 2022

ಬೆಂಗಳೂರು ನಗರ

ಪದ್ಮಶ್ರೀ ಪುರಸ್ಕೃತ ಸೂಲಗಿತ್ತಿ ನರಸಮ್ಮ ನಿಧನ - 1 min read

Photo Credit :

ಪದ್ಮಶ್ರೀ ಪುರಸ್ಕೃತ ಸೂಲಗಿತ್ತಿ ನರಸಮ್ಮ ನಿಧನ

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾಗಿದ್ದ ಸೂಲಗಿತ್ತಿ ನರಸಮ್ಮ ಅವರು ಮಂಗಳವಾರ ನಿಧನ ಹೊಂದಿದರು.

98ರ ಹರೆಯದ ನರಸಮ್ಮ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ನರಸಮ್ಮ ಅವರಿಗೆ ಕಳೆದ ಕೆಲವು ದಿನಗಳಿಂದ ಇಲ್ಲಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ನರಸಮ್ಮ ಅವರು ಸುಮಾರು ಆಸ್ಪತ್ರೆ ಹಾಗೂ ವೈದ್ಯರಿಲ್ಲದ ಕಾಲದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಯಶಸ್ವಿ ಹೆರಿಗೆ ಮಾಡಿಸಿದ್ದರು. ಇವರ ಕಾರ್ಯವನ್ನು ಪರಿಗಣಿಸಿ ಭಾರತ ಸರ್ಕಾರ 2018ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 2013ರಲ್ಲಿ ವಯೋಶ್ರೇಷ್ಠ ಸಮ್ಮಾನ ಪ್ರಶಸ್ತಿ ನೀಡಿ ಗೌರವಿಸಿತ್ತು.

ನರಸಮ್ಮ ಅವರು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೃಷ್ಣಾಪುರದವರು. ಇವರು ಹೆರಿಗೆ ತಜ್ಞೆ ಮಾತ್ರವಲ್ಲದೆ, ಗರ್ಭಿಣಿಯರಿಗೆ ಆಯುರ್ವೇದ ಔಷಧಿ ಕೂಡ ನೀಡುತ್ತಲಿದ್ದರು.

See also  ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಕಾರ್ಮಿಕರ ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು