ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಗೆ ಸಂಕಷ್ಟ ಎದುರಾಗಿದ್ದು, ಪಕ್ಷೇತರ ಅಭ್ಯರ್ಥಿಗಳಿಬ್ಬರು ಬೆಂಬಲ ಹಿಂಪಡೆದಿದ್ದಾರೆ ಎಂದು ವರದಿಗಳು ಹೇಳಿವೆ.
ಎಚ್. ನಾಗೇಶ್ ಮತ್ತು ಆರ್. ಶಂಕರ್ ಅವರು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿರುವುದಾಗಿ ವರದಿಗಳು ತಿಳಿಸಿವೆ.
ಮೈತ್ರಿ ಸರ್ಕಾರಕ್ಕೆ ನೀಡಿರುವಂತಹ ಬೆಂಬಲ ಹಿಂಪಡೆದಿರುವುದಾಗಿ ಪಕ್ಷೇತರ ಶಾಸಕರಿಬ್ಬರು ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಕ್ಷೇತರ ಶಾಸಕ ಆರ್. ಶಂಕರ್ ಅವರು, ಸರ್ಕಾರ ಬದಲಾಯಿಸುವ ಕಾರಣಕ್ಕಾಗಿ ಬೆಂಬಲ ವಾಪಸ್ ಪಡೆದಿರುವುದಾಗಿ ತಿಳಿಸಿದ್ದಾರೆ.
ಇಂದು ಮಕರ ಸಂಕ್ರಾಂತಿ, ಈ ದಿನದಂದು ನಾವು ಸರ್ಕಾರ ಬದಲಾಯಿಸಲು ಬಯಸಿದ್ದೇವೆ. ಇದರಿಂದಾಗಿ ಬೆಂಬಲ ವಾಪಸ್ ಪಡೆದಿರುವುದಾಗಿ ಅವರು ಹೇಳಿದ್ದಾರೆ.