ಬೆಂಗಳೂರು: ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿರುವಂತಹ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರನ್ನು ಬಿಡದಿ ಪೊಲೀಸರು ಇಂದು ಬೆಂಗಳೂರಿಗೆ ಕರೆತಂದರು.
ಬುಧವಾರ ಕಂಪ್ಲಿ ಗಣೇಶ್ ಅವರನ್ನು ಗುಜರಾತ್ ನಲ್ಲಿ ಬಂಧಿಸಲಾಗಿತ್ತು ಎಂದು ತಿಳಿದುಬಂದಿದೆ.
ವಿಮಾನ ಮೂಲಕವಾಗಿ ಗಣೇಶ್ ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ವಿಮಾನ ನಿಲ್ದಾಣದಿಂದ ಗಣೇಶ್ ಅವರನ್ನು ನೇರವಾಗಿ ಬಿಡದಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಇದರ ಬಳಿಕ ರಾಮನಗರದಲ್ಲಿರುವ ಸಿಜೆಎಂ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗುವುದು.