ಬೆಂಗಳೂರು: ನಗರದ ವಿದ್ಯಾರ್ಥಿಗಳನ್ನು ಹಾಗೂ ಯುವಕರನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ನ್ನು ಮಾರಾಟ ಮಾಡುತ್ತಿದ್ದ ಐವರಿಕೋಸ್ಟ್ ನ ಪ್ರಜೆಯನ್ನು ಸಿಟಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಸ್ತಾಫ(44) ಎಂದು ಗುರುತಿಸಲಾಗಿದ್ದು, ಈತ ನಗರದ ಚಿಕ್ಕಣ್ಣ ಲೇಜೌಟ್ ನಲ್ಲಿ ವಾಸವಾಗಿದ್ದ ಎಂದು ತಿಳಿದು ಬಂದಿದೆ. ಪತ್ನಿ ಜತೆ ಈತ ನೆಲೆಸಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.
ಡ್ರಗ್ಸ್ ನ್ನು ಸಂಗ್ರಹಿಸಿಡಲು ಪ್ರತ್ಯೇಕ ಮನೆಯನ್ನು ಮಾಡಿಕೊಂಡಿದ್ದ ಈತ, 2015ರಲ್ಲಿ ಕೆಲಸಕ್ಕೆಂದು ಬೆಂಗಳೂರಿಗೆ ಬಂದಿದ್ದಾನೆ.
ಎಸಿಪಿ ಶೋಭಾ ಎಸ್.ಕಟಾವ್ಕರ್ ಅವರ ನೇತೃತ್ವದ ತಂಡ ಗುರುವಾರ ಮನೆ ಮೇಲೆ ದಾಳಿ ನಡೆಸಿ ಆರೋಪಿ ಸಹಿತ 15ಲಕ್ಷ ರೂಪಾಯಿಯ 32 ಕೆಜಿ ಡ್ರಗ್ಸ್ ನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಈತನ ಸಹಪಾಠಿಗಳು ಪರಾರಿಯಾಗಿದ್ದು ಅವರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.