ಬೆಂಗಳೂರು: ರೈತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಅರೆಬೆತ್ತಲೆ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಸಾವಿರಾರು ಮಂದಿ ರೈತರು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದರು.
ರೈತರು ವಿಧಾನಸಭೆಗೆ ಮುತ್ತಿಗೆ ಹಾಕಲು ಪಾದಯಾತ್ರೆ ನಡೆಸುತ್ತಿದ್ದ ವೇಳೆ ಪೊಲೀಸರು ತಡೆಯೊಡ್ಡಿದರು. ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಾಲ ಮನ್ನಾ ಮಾಡಿದರೂ ಬ್ಯಾಂಕ್ ಗಳು ರೈತರಿಗೆ ಕಿರುಕುಳ ನೀಡುತ್ತಿದೆ. ರೈತರ ಮೇಲಿರುವ ಎಲ್ಲಾ ಪ್ರಕರಣ ರದ್ದು ಮಾಡಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟಿಸಿದರು.