ಬೆಂಗಳೂರು: ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಿದೆ.
ಎಸಿಬಿ ಅಧಿಕಾರಿಗಳು ಬೆಂಗಳೂರು, ಮಂಗಳೂರು, ಧಾರವಾಡ, ಬೆಳವಾವಿ, ಉತ್ತರ ಕನ್ನಡ ಸಹಿತ ಹಲವಾರು ಕಡೆಗಳಲ್ಲಿ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಮಂಗಳೂರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಎಇ ಮಹದೇವಪ್ಪ ಅವರ ಮನೆ, ಬೆಂಗಳೂರಿನಲ್ಲಿರುವ ಮನೆ ಸಹಿತ ಹಲವಾರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.