ಬೆಂಗಳೂರು: ಉಸಿರಾಟ ಸಮಸ್ಯೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕ ರಕ್ತದೊತ್ತಡ ಹಾಗೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಕಾಗೋಡು ಬಳಲುತ್ತಿದ್ದರು.
ಗುರುವಾರ ರಾತ್ರಿ ಸಾಗರದ ತಮ್ಮ ನಿವಾಸದಲ್ಲಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದು ಅವರನ್ನು ಐಸಿಯುವಿನಿಂದ ವಿಶೇಷ ವಾರ್ಡ್ ಗೆ ದಾಖಲಿಸಲಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.