ಬೆಂಗಳೂರು: ಮೈತ್ರಿ ಸರ್ಕಾರದ ಒಟ್ಟು 14 ಮಂದಿ ಶಾಸಕರು ರಾಜೀನಾಮೆ ನೀಡಿರುವುದಾಗಿ ಎಚ್. ವಿಶ್ವನಾಥ್ ಅವರು ಹೇಳಿದ್ದಾರೆ.
ವಿಜಯನಗರ ಶಾಸಕ ಆನಂದ್ ಸಿಂಗ್ ಸಹಿತ ಒಟ್ಟು 14 ಮಂದಿ ಸರ್ಕಾರದ ಧೋರಣೆಯನ್ನು ಖಂಡಿಸಿ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದರು.
ಶನಿವಾರ ಸಂಜೆ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ವಿಶ್ವನಾಥ್ ಮಾತನಾಡಿದರು.
ಸಮ್ಮಿಶ್ರ ಸರ್ಕಾರ ವಿರುದ್ಧ ಕಿಡಿಕಾರಿದ ವಿಶ್ವನಾಥ್ ಅವರು, ಈ ಎಲ್ಲಾ ಬೆಳವಣಿಗೆಗೆ ರಾಜ್ಯದ ಮುಖ್ಯಮಂತ್ರಿಗಳೇ ಕಾರಣ ಎಂದರು.
ರಾಜ್ಯಪಾಲರನ್ನು ಭೇಟಿಯಾದ ಅತೃಪ್ತ ಶಾಸಕರು ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಇದೇ ವೇಳೆ ಅವರು ಡಿಕೆ ಶಿವಕುಮಾರ್ ವಿರುದ್ಧ ದೂರು ನೀಡಿದರು. ಇದರ ಬಳಿಕ ಎಲ್ಲಾ ಶಾಸಕರಿಗೂ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರಿಗೆ ರಾಜ್ಯಪಾಲರು ಸೂಚಿಸಿದರು.