ಬೆಂಗಳೂರು: ಮೈತ್ರಿ ಸರ್ಕಾರದ ಪ್ರಮುಖ ಸಚಿವರ ಸಹಿತ ಎಲ್ಲಾ ಸಚಿವರುಗಳು ರಾಜೀನಾಮೆ ನೀಡಿದ್ದು ಮೈತ್ರಿ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ.
ಈ ಬಗ್ಗೆ ಸೋಮವಾರ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜೀನಾಮೆ ಕೊಟ್ಟು ಹೋಗಿರುವ ಶಾಸಕರು ಮರಳಿ ಬಂದರೆ ಅವರಿಗೆ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿ ಮೈತ್ರಿ ಸರ್ಕಾರ ಕೆಡವಲು ಇದು ಆರನೇ ಸಲ ಪ್ರಯತ್ನಿಸುತ್ತಿದೆ. ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ. ಕಾಂಗ್ರೆಸ್ ಹೀಗೆ ಮಾಡಿಲ್ಲ. 2008ರಲ್ಲಿ ಇದೇ ರೀತಿಯಲ್ಲಿ ಬಿಜೆಪಿ ಅಧಿಕಾರ ಗಟ್ಟಿ ಮಾಡಿಕೊಂಡಿತ್ತು ಎಂದು ಅವರು ದೂರಿದರು.
ಹಣ ಮತ್ತು ಅಧಿಕಾರ ಆಮಿಷವೊಡ್ಡಿ ಬಿಜೆಪಿಯು ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರನ್ನು ತನ್ನೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.