ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹಕ್ಕೆ ಒಟ್ಟು 12ಮಂದಿ ಸಾವನ್ನಪ್ಪಿದ್ದು, 13 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದೆ.
8 ಜಿಲ್ಲೆಗಳಲ್ಲಿ ನಿರಾಶ್ರಿತ ಕೇಂದ್ರ ತೆರೆದಿದ್ದು, 5,444ಮನೆಗಳಿಗೆ ಹಾನಿಯಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್. ಅಶೋಕ್, ಕೇಂದ್ರ ಸರ್ಕಾರಕ್ಕೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಲ್ಲಿಸಿ, ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದರು.