ಬೆಂಗಳೂರು: ದೆಹಲಿ ಹೈಕೋರ್ಟ್ ನಿಂದ ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಭಾನುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಡಾ.ಜಿ.ಪರಮೇಶ್ವರ್ ಸಹಿತ ಹಲವು ಗಣ್ಯರು ಭೇಟಿಯಾಗಿ ಮಾತುಕತೆ ನಡೆಸಿದರು.
ಡಿಕೆಶಿ ಸದಾಶಿವನಗರದ ಮನೆಗೆ ಗಣ್ಯರ ದಂಡು ಆಗಮಿಸುತಿದ್ದು ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ
ಡಿಕೆಶಿ ಅವರು ಮಧ್ಯಾಹ್ನ ತುಮಕೂರಿನ ನೊಣವಿನಕೆರೆ ಅಜ್ಜಯ್ಯನ ಪೀಠಕ್ಕೆ ತೆರಳಲಿದ್ದು, ಬಳಿಕ ಶಿರಾಕ್ಕೆ ತೆರಳಿ ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿ ಮಾಡಲಿದ್ದಾರೆ.