ಬೆಂಗಳೂರು: ಒಂಭತ್ತನೇ ತರಗತಿಯ ನಾಲ್ಕು ಮಂದಿ ವಿದ್ಯಾರ್ಥಿಗಳು ಐದನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಅದರ ವೀಡಿಯೋ ಮಾಡಿರುವ ತುಂಬಾ ಆಘಾತಕಾರಿ ಘಟನೆಯು ಬೆಂಗಳೂರು ಹೊರವಲಯದ ಗ್ರಾಮದಲ್ಲಿ ನಡೆದಿದೆ.
ಐದನೇ ತರಗತಿ ವಿದ್ಯಾರ್ಥಿನಿಯು ದನಗಳನ್ನು ಮೇಯಿಸುತ್ತಿರುವ ವೇಳೆ ಅಲ್ಲಿಗೆ ಬಂದ ನಾಲ್ಕು ಮಂದಿ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ನೀಡಿ ಇದನ್ನು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾರೆ.
ಈ ಘಟನೆಯ ವೀಡಿಯೋ ಹೊರಬಿದ್ದ ಬಳಿಕ ಘಟನೆಯು ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಮತ್ತುಇನ್ನು ಇಬ್ಬರು ಹುಡುಗರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಾಪರಾಧಿಗಳಾಗಿರುವ ಕಾರಣದಿಂದಾಗಿ ಹೆಚ್ಚಿನ ಮಾಹಿತಿ ಹೊರಹಾಕಿಲ್ಲ.