ಬೆಂಗಳೂರು: ದೀಪಾವಳಿ ಸಂಧರ್ಭದಲ್ಲಿ ಪಟಾಕಿ ಸಿಡಿಸುವ ವೇಳೆ ಸುಮಾರು 47 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯು ಭಾನುವಾರ ಹಾಗೂ ಸೋಮವಾರ ನಡೆದಿದೆ.
ಮೂಲಗಳ ಪ್ರಕಾರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಲೆಕ್ಕ ಮಾತ್ರ ಸಿಕ್ಕಿದೆ. ಇದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಗಾಯಾಳುಗಳಲ್ಲಿ ಹೆಚ್ಚಾಗಿ ಮಕ್ಕಳು ಇದ್ದಾರೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.