ಬೆಂಗಳೂರು: ಡಿವೈಎಸ್ ಪಿ ಗಣಪತಿ ಸಾವು ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ಕೆ.ಜೆ.ಜಾರ್ಜ್ ಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ.
ಸಿಬಿಐ ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ, ಕೆಜೆ ಜಾರ್ಜ್ ಅಥವಾ ಇತರ ಯಾವುದೇ ಅಧಿಕಾರಿಗಳ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ ಎಂದು ಸಿಬಿಐ ತಂಡ ಹೇಳಿದೆ.
2016 ಜುಲೈ 7ರಂದು ಮಡಿಕೇರಿ ಹೊಟೇಲ್ ನಲ್ಲಿ ಗಣಪತಿ ಆತ್ಮಹತ್ಯೆಗೆ ಶರಣಾಗಿದ್ದರು.ಆಗ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರೇ ಸಾವಿಗೆ ಕಾರಣ ಎಂದು ಆರೋಪ ಕೇಳಿ ಬಂದಿತ್ತು. ನಂತರ ಸುಪ್ರೀಂಕೋರ್ಟ್ ಚೆನ್ನೈನ ಸಿಬಿಐಗೆ ತನಿಖೆ ನಡೆಸುವಂತೆ ಆದೇಶ ನೀಡಿತ್ತು. ಇದೀಗ ಸುಪ್ರೀಂ ಆದೇಶದಂತೆ ತನಿಖೆ ಪೂರ್ಣಗೊಂದಿಡ್ಡು, ಕೆ.ಜೆ.ಜಾರ್ಜ್ ಗೂ ಸಾವಿಗೂ ಸಂಬಂಧವಿಲ್ಲ ಎಂದು ಹೇಳಿದೆ.
ಪ್ರಕರಣ ಸಂಬಂಧ 262ಪುಟಗಳ ಸುದೀರ್ಘ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.