ಬೆಂಗಳೂರು: ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ನಂತರ ಬೆಂಗಳೂರು ಪೊಲೀಸರು ನಗರದ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಮುತುವರ್ಜಿ ವಹಿಸಲಾಗುವುದು ಎಂದು ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ನಡೆದ ಘಟನೆ ಬಳಿಕ ಬೆಂಗಳೂರಿನ ಮಹಿಳೆಯರ ಸುರಕ್ಷತೆಯ ದೃಷ್ಟಿಯಲ್ಲಿ ಹೆಚ್ಚಿನ ಭದ್ರತೆಗಳನ್ನು ನೀಡಲಾಗುವುದು. ರಕ್ಷಣೆ ಕೋರಿ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದರು ದೂರು ದಾಖಲಿಸಿಕೊಂಡು ರಕ್ಷಣೆಗೆ ಮುಂದಾಗುತ್ತೇವೆ ಎಂದರು. ಎಲ್ಲ ಕರೆಗಳಿಗೂ 7 ಸೆಕೆಂಡುಗಳಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಿದರು.
ನವೆಂಬರ್ 28ರಂದು ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಸುಟ್ಟು ಹಾಕಿದ್ದರು. ಆರೋಪಿಗಳ ವಿರುದ್ಧ ದೇಶವೇ ಅಕ್ರೋಶವನ್ನು ವ್ಯಕ್ತಪಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸುತ್ತದೆ. ಹೈದರಾಬಾದ್ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂದಿಸಿ ತನಿಖೆ ನಡೆಸುತ್ತಿದ್ದಾರೆ.