ಬೆಂಗಳೂರು: 17 ವರ್ಷದ ಹುಡುಗಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಕ್ಕಳ ಸ್ನೇಹಿ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.ನಗರದ ಮಕ್ಕಳ ಸ್ನೇಹಿ ನ್ಯಾಯಾಲಯವೊಂದರ ನ್ಯಾಯಾಧೀಶೆ ಆರ್ . ಶಾರದಾ ಆದೇಶ ಹೊರಡಿಸಿದ್ದಾರೆ.
ಮೂಲತ: ಮಂಡ್ಯದಿಂದ ಬಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಹೆಚ್. ಎಸ್. ಮಹೇಶ್ ಶಿಕ್ಷೆಗೊಳಗಾಗದ ಆರೋಪಿಯಾಗಿದ್ದಾನೆ.
2014 ಏಪ್ರಿಲ್ 24 ರಂದು ಅತ್ಯಾಚಾರ ಘಟನೆ ನಡೆದಿತ್ತು. ಸೊಳ್ಳೆ ಪರದೆ ತಯಾರಿಕಾ ಕಂಪನಿಯಲ್ಲಿ ತನ್ನೊಂದಿಗೆ ಕೆಲಸ ಮಾಡುತ್ತಿದ್ದ ಮಹೇಶ್ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದಳು.