News Kannada
Friday, December 09 2022

ಬೆಂಗಳೂರು ನಗರ

ಉಪಚುನಾವಣೆ 12 ಸ್ಥಾನ ಗೆದ್ದ ಬಿಜೆಪಿ: ಯಡಿಯೂರಪ್ಪ ಸಿಎಂ ಪಟ್ಟ ಸುಭದ್ರ

Photo Credit :

ಉಪಚುನಾವಣೆ 12 ಸ್ಥಾನ ಗೆದ್ದ ಬಿಜೆಪಿ: ಯಡಿಯೂರಪ್ಪ ಸಿಎಂ ಪಟ್ಟ ಸುಭದ್ರ

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ 12 ಸ್ಥಾನದಲ್ಲಿ ಭರ್ಜರಿ ಗೆಲುವು ದಾಖಲಿಸಿಕೊಂಡಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಸರ್ಕಾರವನ್ನು ಉಳಿಸಿಕೊಂಡಿದೆ.

ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ಉಳಿಸಿಕೊಳ್ಳಲು ಎಂಟು ಸ್ಥಾನಗಳಲ್ಲಿ ಗೆಲ್ಲುವುದು ಅತೀ ಅನಿವಾರ್ಯವಾಗಿತ್ತು. ಆದರೆ 12 ಸ್ಥಾನದಲ್ಲಿ ಗೆಲುವು ದಾಖಲಿಸಿಕೊಂಡು ಸರ್ಕಾರವನ್ನು ಸುಭದ್ರಗೊಳಿಸಿದೆ. ಕಾಂಗ್ರೆಸ್ ಎರಡು ಸ್ಥಾನ ಮತ್ತು ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ.

ಚಿಕ್ಕಾಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ 31831 ಮತಗಳ ಅಂತರದಲ್ಲಿ ಗೆಲುವು ಪಡೆದುಕೊಂಡಿದ್ದಾರೆ.

ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಜಯ.

ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಗೆ ಜಯ

ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ ಗೆ ಜಯ

ಗೋಕಾಕ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಜಯ

ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಜಯ

ಅಥಣಿಯಲ್ಲಿ ಬಿಜೆಪಿಯ ಮಹೇಶ್ ಕಮಠಳ್ಳಿಗೆ ಭರ್ಜರಿ ಜಯ

ಕಾಗವಾಡದಲ್ಲಿ ಬಿಜೆಪಿಯ ಶ್ರೀಮಂತ ಪಾಟೀಲ್ ಗೆ ಜಯ.

See also  ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನ ಅನಿರೀಕ್ಷಿತ: ಸುಧಾಮೂರ್ತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು