News Kannada
Sunday, November 27 2022

ಬೆಂಗಳೂರು ನಗರ

ಸ್ಯಾನ್‍ಫ್ರಾನ್ಸಿಸ್ಕೊನಿಂದ ಬೆಂಗಳೂರಿಗೆ 107 ಮಂದಿ ಆಗಮನ - 1 min read

Photo Credit :

ಸ್ಯಾನ್‍ಫ್ರಾನ್ಸಿಸ್ಕೊನಿಂದ ಬೆಂಗಳೂರಿಗೆ 107 ಮಂದಿ ಆಗಮನ

ಬೆಂಗಳೂರು ಗ್ರಾ.: ಕೋವಿಡ್-19 ಲಾಕ್‍ಡೌನ್ ಪರಿಸ್ಥಿತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೊದಿಂದ ಶುಕ್ರವಾರ ಬೆಳಗ್ಗೆ 9ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 107 ಮಂದಿ ಬಂದಿಳಿದಿದ್ದಾರೆ.

ನಾಲ್ಕನೇ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕರಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 107 ಮಂದಿಯಿದ್ದು, ಅವರಲ್ಲಿ 59 ಪುರುಷ ಮತ್ತು 48 ಮಹಿಳೆಯರು, ಒಬ್ಬರು ಗರ್ಭಿಣಿ ಮಹಿಳೆ ಹಾಗೂ 10 ವರ್ಷದೊಳಗಿನ ಒಂದು ಮಗು ಇದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ನಡೆಸಿದ 107 ಪ್ರಯಾಣಿಕರ ಕೋವಿಡ್-19 ಆರೋಗ್ಯ ತಪಾಸಣೆ ವೇಳೆ, ಒಬ್ಬ ಪುರುಷ ಪ್ರಯಾಣಿಕನಲ್ಲಿ ಕೊರೋನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆ, ಆ ವ್ಯಕ್ತಿಯನ್ನು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ಬೆಂಗಳೂರಿನ ರಾಜೀವ್ ಗಾಂಧಿ ಹೃದ್ರೋಗ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಉಳಿದ 106 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‍ಗಾಗಿ ಹೋಟೆಲ್‍ಗಳಿಗೆ ಬಿಎಂಟಿಸಿ ಬಸ್‍ಗಳ ಮೂಲಕ ಕಳುಹಿಸಿಕೊಡಲಾಗಿದ್ದು, ಕ್ವಾರಂಟೈನ್ ವೆಚ್ಚವನ್ನು ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

See also  ಕೊರೋನ ಸೀರಿಯಸ್ ಆದ ಮೇಲೆ ಬೆಡ್​ಗೆ ಅಲೆಯೋದು ಸರಿಯಲ್ಲ: ಆರ್ ಅಶೋಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು