News Kannada
Monday, October 03 2022

ಬೆಂಗಳೂರು ನಗರ

ಅನಧಿಕೃತ ಶಾಲೆ ಮಾನ್ಯತೆ ರದ್ದಿಗೆ ಶಿಕ್ಷಣ ಸಚಿವರಿಗೆ ಶಿಫಾರಸ್ಸು - 1 min read

Photo Credit :

ಅನಧಿಕೃತ ಶಾಲೆ ಮಾನ್ಯತೆ ರದ್ದಿಗೆ ಶಿಕ್ಷಣ ಸಚಿವರಿಗೆ ಶಿಫಾರಸ್ಸು

ಬೆಂಗಳೂರು: ಸರ್ಕಾರದ ಸ್ಥಳಾಂತರದ ಅನುಮತಿಯಿಲ್ಲದೆ ಅನಧಿಕೃತವಾಗಿ ನಡೆಸುತ್ತಿರುವ ಬೆಂಗಳೂರಿನ ಚೋಳೂರು ಪಾಳ್ಯದಲ್ಲಿರುವ ಶ್ವೇತಾ ಪಬ್ಲಿಕ್ ಶಾಲೆ(ಸೇಂಟ್ ಮಿರಾಸ್ ಪಬ್ಲಿಕ್ ಸ್ಕೂಲ್)ಯ ಮಾನ್ಯತೆಯನ್ನು ರದ್ದು ಮಾಡಿ ಕಾನೂನು ರೀತಿ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್. ನಾಗಾಭರಣ ಅವರು ಮಾನ್ಯ ಶಿಕ್ಷಣ ಸಚಿವರಿಗೆ ಶಿಫಾರಸ್ಸು ಮಾಡಿದ್ದಾರೆ.

ಚೋಳೂರು ಪಾಳ್ಯದಲ್ಲಿನ ಶ್ರೀ ಶ್ವೇತಾ ಪಬ್ಲಿಕ್ ಶಾಲೆಯು ಅನುದಾನರಹಿತ ಆಂಗ್ಲಮಾಧ್ಯಮ ಶಾಲೆಯಾಗಿದ್ದು ಶಿಕ್ಷಣ ಇಲಾಖೆಯ ನಿಯಮಾವಳಿಗೆ ವಿರುದ್ಧವಾಗಿ ಬೇರೊಂದು ಸ್ಥಳದಲ್ಲಿ ಅನುಮತಿಯಿಲ್ಲದೆ ಅನಧಿಕೃತ ಕಟ್ಟಡದಲ್ಲಿ ನಡೆಸುತ್ತಿರುವುದರಿಂದ ಈ ಶಾಲೆಯ ವಿರುದ್ಧ  ಕ್ರಮಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಬರೆದಿತ್ತು. ಅಲ್ಲದೆ ಶಾಲೆಯ ಸ್ಥಳಾಂತರದ ಬಗ್ಗೆ ಪರಿಶೀಲಿಸಿ ವರದಿ ನೀಡಲು ತ್ರಿಸದಸ್ಯ ಸಮಿತಿಯೊಂದನ್ನು ರಚಿಸುವಂತೆಯೂ ತಿಳಿಸಲಾಗಿತ್ತು. ಆದರೆ ಸದರಿ ಸಮಿತಿಯು ಶ್ವೇತಾ ಪಬ್ಲಿಕ್ ಶಾಲೆಯೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಕ್ಷೇಪಣೆಗೆ ಸಂಬಂಧಿಸುವುದಿಲ್ಲ ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಬರೆಯಲಾಗಿರುವ ಪತ್ರದಲ್ಲಿ ಉಲ್ಲೇಖಿಸಿರುವುದು ಪ್ರಾಧಿಕಾರದ ಅಧ್ಯಕ್ಷರ ಕಣ್ಣನ್ನು ಕೆಂಪಗಾಗುವಂತೆ ಮಾಡಿದೆ. ತ್ರಿಸದಸ್ಯ ಸಮಿತಿಯಲ್ಲಿದ್ದ ಸದಸ್ಯರು ಯಾರು? ಕನ್ನಡ ಅಭಿವೃಧ್ದಿ ಪ್ರಾಧಿಕಾರದ ವ್ಯಾಪ್ತಿಯನ್ನು ಪ್ರಶ್ನಿಸುವ ಹಕ್ಕನ್ನು ಆ ಸಮಿತಿಗೆ ಶಿಕ್ಷಣ ಇಲಾಖೆ ನೀಡಿದೆಯೇ? ಎಂದು ಶಿಕ್ಷಣ ಸಚಿವರಾದ ಎಸ್.ಸುರೇಶ್  ಕುಮಾರ್ ಅವರಿಗೆ ಬರೆಯಲಾಗಿರುವ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದಿನಾಂಕ: 18-12-2020 ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿಯೂ ಸದರಿ ಪ್ರಕರಣ ಸಂಬಂಧ ಚರ್ಚಿಸಿದ್ದು, ಈ ಕುರಿತು ಒಂದು ವಾರದೊಳಗೆ ಸಕ್ಷಮ ಪ್ರಾಧಿಕಾರಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಾಧಿಕಾರಕ್ಕೆ ವರದಿ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದರೂ ಇದುವರೆಗೂ ವರದಿ ನೀಡದೆ ನಿರ್ಲಕ್ಷವಹಿಸಿರುವುದು ಅವರ ಉದ್ಧಟತನವನ್ನು ಮತ್ತು ಕನ್ನಡ ವಿರೋಧಿ ನಡವಳಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

See also  ಸಚಿವ ಕೆ. ಈಶ್ವರಪ್ಪಗೆ ಕೋವಿಡ್-19 ಪಾಸಿಟಿವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು