News Kannada
Tuesday, October 04 2022

ಬೆಂಗಳೂರು ನಗರ

ಪರೀಕ್ಷಾ ಕೇಂದ್ರಗಳಲ್ಲಿ  ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ - 1 min read

Photo Credit :

ಪರೀಕ್ಷಾ ಕೇಂದ್ರಗಳಲ್ಲಿ  ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ

ಬೆಂಗಳೂರು ಗ್ರಾ.: ಕೋವಿಡ್-19 ಲಾಕ್‍ಡೌನ್ ಹಿನ್ನೆಲೆಯಲ್ಲಿ  ಮಾರ್ಚ್ 23ರಂದು ನಿಗದಿಯಾಗಿದ್ದ ದ್ವಿತೀಯ ಪಿ.ಯು.ಸಿ.ಯ  ಇಂಗ್ಲೀಷ್ ವಿಷಯದ ಪರೀಕ್ಷೆಯು ಜೂನ್ 18ರಂದು ನಡೆಯಲಿದ್ದು, ಪರೀಕ್ಷಾ ಕೇಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಮೂಲಕ  ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು  ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಅವರು ಹೇಳಿದ್ದಾರೆ.

ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರಗಳಿದ್ದು, ಈ ಜಿಲ್ಲೆಯ 8,743 ವಿದ್ಯಾರ್ಥಿಗಳು  ಒಳಗೊಂಡಂತೆ 117  ಹೊರ ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಥರ್ಮಲ್ ಸ್ಕ್ರೀನಿಂಗ್ ಮೂಲಕ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸಲು ಅವಕಾಶ ಕಲ್ಪಿಸುವ ಮೂಲಕ ಕೊರೋನಾ ವೈರಾಣು ಸೋಂಕು ಹರಡದಂತೆ ಎಚ್ಚರಿಕೆಯಿಂದ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಎಲ್ಲಾ 13 ಪರೀಕ್ಷಾ ಕೇಂದ್ರಗಳಿಗೆ ವೈದ್ಯಕೀಯ ಸಿಬ್ಬಂದಿಗಳನ್ನು ಕಡ್ಡಾಯವಾಗಿ ಆರೋಗ್ಯ ಇಲಾಖೆ ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಆವರಣ ಹಾಗೂ ಕೊಠಡಿಯ ಒಳಗೆ ಸಂಪೂರ್ಣವಾಗಿ ಸೋಂಕು ನಿವಾರಕ ಔಷಧಿ ಸಿಂಪಡಿಸಿ ಸುರಕ್ಷತೆಯೊಂದಿಗೆ ಸ್ವಚ್ಛತೆ ಕಾಪಾಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಯಾರಿಗೂ ಮೊಬೈಲ್ ಕೊಂಡೊಯ್ಯಲು ಅವಕಾಶವಿಲ್ಲ.  ಪರೀಕ್ಷೆಯು ಸಂಪೂರ್ಣವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅನುಕೂಲವಾಗುವಂತೆ  ಕೆ.ಎಸ್.ಆರ್.ಟಿ.ಸಿ. ಬಸ್ ವ್ಯವಸ್ಥೆ ಮಾಡಲು ಮನವಿ ಮಾಡಲಾಗಿದ್ದು, ಕೆಲವು ವಿದ್ಯಾರ್ಥಿಗಳು ತಮ್ಮ ಸ್ವಂತ ವಾಹನದಲ್ಲಿ ಬರುವುದಾಗಿ ತಿಳಿಸಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕಲಾವತಿ ಅವರು ಸಭೆಗೆ ಮಾಹಿತಿ ನೀಡಿದ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ  ವಿನುತಾರಾಣಿ,  ಜಿಲ್ಲಾ  ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಮಾರೇಗೌಡ ಸೇರಿದಂತೆ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

See also  ರಾಜ್ಯದಲ್ಲಿ ಜಾತ್ರಾ ಮಹೋತ್ಸವ ನಡೆಸಲು ರಾಜ್ಯ ಸರ್ಕಾರ ಅನುಮತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು