News Kannada
Friday, September 30 2022

ಬೆಂಗಳೂರು ನಗರ

ರಾಜ್ಯ ಪ್ರವಾಸೋದ್ಯಕ್ಕೆ 7 ಸಾವಿರ ಕೋಟಿ ರೂ.ನಷ್ಟ: ಸಿ.ಟಿ.ರವಿ - 1 min read

Photo Credit :

ರಾಜ್ಯ ಪ್ರವಾಸೋದ್ಯಕ್ಕೆ 7 ಸಾವಿರ ಕೋಟಿ ರೂ.ನಷ್ಟ: ಸಿ.ಟಿ.ರವಿ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಾದ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರ ಸಂಪೂರ್ಣ ಕುಸಿದುಬಿದ್ದಿದ್ದು, ಸುಮಾರು 6ರಿಂದ 7 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.

ಕೋವಿಡ್-19 ಪರಿಣಾಮ ರಾಜ್ಯದ ಯಾವುದೇ ಪ್ರವಾಸಿ ತಾಣಗಳಿಗೆ ಹೊರ ರಾಜ್ಯ ಮತ್ತು ವಿದೇಶಗಳಿಂದ ಪ್ರವಾಸಿಗಳು ಆಗಮಿಸುತ್ತಿಲ್ಲ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬರುತ್ತಿದ್ದ ಸುಮಾರು 6ರಿಂದ 7 ಸಾವಿರ ಕೋಟಿ ರೂ.ನಷ್ಟು ಆದಾಯ ನಷ್ಟ ಉಂಟಾಗಿದೆ. ಇದರಿಂದ ಇಲಾಖೆಯನ್ನು ಮುನ್ನೆಡೆಸುವುದೇ ಸವಾಲಿನ ಕೆಲಸವಾಗಿ ಎಂದು ಆತಂಕ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಂಗಲ್‍ರೆಸ್ಟಾರ್ಟ್, ಕೆಎಸ್‍ಟಿಡಿಸಿ, ಟ್ಯಾಕ್ಸಿ ಸೇರಿದಂತೆ ಮತ್ತಿತರ ಮೂಲಗಳಿಂದ ಬರುತ್ತಿದ್ದ ಆದಾಯ ಸಂಪೂರ್ಣವಾಗಿ ನಿಂತುಹೋಗಿದೆ. ಇನ್ನು ಖಾಸಗಿಯವರ ಲೆಕ್ಕ ನಮಗೆ ಈವರೆಗೂ ಸಿಕ್ಕಿಲ್ಲ. ಅದು ಸೇರ್ಪಡೆಯಾದರೆ ಇನ್ನು ಹೆಚ್ಚಿನ ನಷ್ಟವಾಗುವ ಸಾಧ್ಯತೆ ಇದೆ ಎಂದರು.

ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇನ್ನುಮುಂದೆ ತಮಿಳುನಾಡು, ಕೇರಳ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದಲ್ಲಿ ಏಕರೂಪ ಪ್ರವೇಶ ತೆರಿಗೆಯನ್ನು ಜಾರಿಗೆ ತರಲು ಸಿಎಂಗೆ ಮನವಿ ಮಾಡಿದ್ದೇವೆ.

ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆಕಿದ್ದು, ಈ ಸಂಬಂಧ ಬೇರೆ ಬೇರೆ ರಾಜ್ಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹೆಚ್ಚು ಪ್ರವೇಶ ತೆರಿಗೆ ಇದೆ. ಹೀಗಾಗಿ ನಮ್ಮ ರಾಜ್ಯದಲ್ಲೂ ಪ್ರವಾಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿರುವ ಪ್ರವಾಸಿ ತಾಣಗಳಲ್ಲಿ ಚಲನಚಿತ್ರ, ಚಿತ್ರೀಕರಣ, ಮಾಡಲು ಸೂಕ್ತವಾದ ವ್ಯವಸ್ಥೆಯನ್ನು ಕಲ್ಪಿಸಲಿದ್ದೇವೆ. ವಿದೇಶಕ್ಕೆ ಹೋಗಿ ಚಿತ್ರೀಕರಣ ಮಾಡುವುದರಿಂದ ನಮಗೆ ನಷ್ಟ ಉಂಟಾಗುತ್ತದೆ. ಇದನ್ನು ತಪ್ಪಿಸಲು ನಮ್ಮ ತಾಣಗಳನ್ನು ಅಲ್ಲಿನ ಪರಿಸರಕ್ಕೆ ತಕ್ಕಂತೆ ಪರಿಸರಸ್ನೇಹಿ ವೇದಿಕೆಯನ್ನು ಸಿದ್ದಪಡಿಸಲಿದ್ದೇವೆ. ಈ ಸಂಬಂಧ ನಿರ್ದೇಶಕರು ಮತ್ತು ನಿರ್ಮಾಪಕರ ಜೊತೆ ಮಾತುಕತೆ ನಡೆಸಿರುವುದಾಗಿ ವಿವರಿಸಿದರು.

See also  ಸಿಎಂಗೆ ಪತ್ರ ಬರೆದ ಸಾರಿಗೆ ನೌಕರರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು