News Kannada
Friday, October 07 2022

ಬೆಂಗಳೂರು ನಗರ

ಖಾಸಗಿ ಶಿಕ್ಷಕರಿಗೆ ಸರ್ಕಾರಿ ಶಿಕ್ಷಕರು ನೆರವಾಗಲು ಮನವಿ - 1 min read

Photo Credit :

ಖಾಸಗಿ ಶಿಕ್ಷಕರಿಗೆ ಸರ್ಕಾರಿ ಶಿಕ್ಷಕರು ನೆರವಾಗಲು ಮನವಿ

ಬೆಂಗಳೂರು: ಕೊರೋನಾ ಕಾಲಘಟ್ಟದಲ್ಲಿನ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ತೀವ್ರ ದುಃಸ್ಥಿತಿಯಲ್ಲಿರವ ಸಾರ್ವಜನಿಕ ಶಿಕ್ಷಣ ಇಲಾಖೆಯ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಇಲಾಖೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಧಾವಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಮನವಿ ಮಾಡಿದ್ದಾರೆ.

ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು, ಖಾಸಗಿ ಶಾಲಾ ಶಿಕ್ಷಕರು ತೀವ್ರ ಸಂಕಷ್ಟದಲ್ಲಿರುವುದನ್ನು ನಮ್ಮ ಇಲಾಖೆ ಗಮನಿಸಿದೆ. ಈ ಕುರಿತು ಸಾರ್ವಜನಿಕವಾಗಿಯೂ ಹೆಚ್ಚಿನ ಕಳಕಳಿ ವ್ಯಕ್ತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಅವರ ನೆರವಿಗೆ ನಾವು ಧಾವಿಸುವುದು ಅಗತ್ಯವೆಂಬುದನ್ನು ನಾವೆಲ್ಲರೂ ಕಂಡುಕೊಳ್ಳಬೇಕಾದ ಸಂದರ್ಭ ಇದಾಗಿದೆ ಎಂದರು.

ಇದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿಯೂ ಸಹ ಆಗಿದೆ. ಹಾಗಾಗಿ ನಮ್ಮ ಶಿಕ್ಷಕ ಬಂಧುಗಳು ಒಂದು ಇಲ್ಲವೇ ಎರಡು ದಿನಗಳ ವೇತನವನ್ನು ನೀಡುವ ಮೂಲಕ ನಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಹೇಗೆ ಬರಬಹುದೆಂಬ ಕುರಿತು ಸರ್ಕಾರದ ಮಟ್ಟದಲ್ಲಿಯೂ ಚಿಂತನೆ ನಡೆದಿದೆ. ಇಲಾಖೆಯ ಲಭ್ಯ ಸಂಪನ್ಮೂಲಗಳ ಮೂಲಕವೂ ಕಷ್ಟದಲ್ಲಿರುವ ನಮ್ಮ ಶಿಕ್ಷಕರಿಗೆ ಇತಿಮಿತಿಗಳಲ್ಲಿ ಆರ್ಥಿಕ ಸಹಕಾರ ನೀಡಲು ಸರ್ಕಾರ ಸಹ ಅವಕಾಶಗಳನ್ನು ಅವಲೋಕಿಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಶಿಕ್ಷಕರಿಗೆ ನೆರವಾಗಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿಯವರು ತಮ್ಮ ಒಂದು ತಿಂಗಳ ವೇತನ ನೀಡಲು ಮುಂದಾಗಿದ್ದಾರೆ. ನಾನೂ ಸಹ ನನ್ನ ಪಾಲನ್ನು ನೀಡುವೆ ಎಂದು ಹೇಳಿರುವ ಸಚಿವರು ನಮ್ಮ ಶಿಕ್ಷಕರು ಉದಾರತೆ ಮೆರೆಯುವ ಮೂಲಕ ಸಮಾಜಕ್ಕೆ ಇಂದು ಅವಶ್ಯವಿರುವ ಸಕಾರಾತ್ಮಕ ಸಂದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಸರ್ಕಾರ ತನ್ನ ಕಠಿಣ ಪರಿಸ್ಥಿತಿಯಲ್ಲಿಯೂ ನಮ್ಮ ಶಿಕ್ಷಕರ ವೇತನ ಭತ್ಯೆಗಳನ್ನು ನೀಡಲು ಯಾವುದೇ ವಿಳಂಬ ಮಾಡಿಲ್ಲ. ಈ ಸಂದರ್ಭದಲ್ಲಿ ನಾವೆಲ್ಲ ಮಾನವೀಯ ಗುಣವನ್ನು ಮರೆಯಬೇಕಿದೆ. ಆ ಮೂಲಕ ನಮ್ಮ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ನಮ್ಮ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮುಂದೆ ಬರಬೇಕೆಂದು ಸುರೇಶ್‌ಕುಮಾರ್ ಶಿಕ್ಷಕ ಸಮೂಹದಲ್ಲಿ ಮನವಿ ಮಾಡಿದ್ದಾರೆ.

See also  ನಮ್ಮ ಮುಷ್ಕರವನ್ನು ಬೆಂಬಲಿಸಿ: ಯಶ್​ಗೆ ಪತ್ರ ಬರೆದ ಸಾರಿಗೆ ನೌಕರರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು