News Kannada
Monday, December 05 2022

ಬೆಂಗಳೂರು ನಗರ

ರಾಜ್ಯಕ್ಕೆ ನೆರವಿನ ಭರವಸೆ ನೀಡಿದ ಸಚಿವ ಸದಾನಂದ ಗೌಡ

Photo Credit :

ರಾಜ್ಯಕ್ಕೆ ನೆರವಿನ ಭರವಸೆ ನೀಡಿದ ಸಚಿವ ಸದಾನಂದ ಗೌಡ

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ಮಣಿಸಲು ರಾಜ್ಯ ಸರಕಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ಎಲ್ಲ ನೆರವು ನೀಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಕರ್ನಾಟಕದಲ್ಲಿ ವಿಶೇಷವಾಗಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಮಹಾಮಾರಿ ನಿಯಂತ್ರಸುವ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಬೆಂಗಳೂರಿನಲ್ಲಿ ನಡೆಸಿದ ಸಚಿವರು, ಸಂಸದರು ಮತ್ತು ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ಸಚಿವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.

ಕೊರೋನಾ ವಿರುದ್ಧದ ಹೋರಾಟದ ವಿಚಾರವಾಗಿ ಕೇಂದ್ರ ಸರ್ಕಾರವು ರಾಜ್ಯಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದೆ. ಇನ್ನೂ ಏನೆಲ್ಲ ಅಗತ್ಯವೋ ಅದನ್ನು ಮಾಡಲು ನಾವು ಸಿದ್ಧರಿದ್ದೇವೆ ಎಂದರು.

ಔಷಧೋದ್ಯಮವೂ ನನ್ನ ಇಲಾಖೆಯ ಅಧೀನದಲ್ಲಿಯೇ ಬರುತ್ತದೆ. ಹಾಗಾಗಿ ನಾನು ಪ್ರತಿದಿನ ಖುದ್ದಾಗಿ ಔಷಧ ಉತ್ಪಾದನೆ,  ವಿತರಣೆ ಹೇಗಾಗುತ್ತಿದೆ ಎಂದು ಪರಿಶೀಲಿಸುತ್ತೇನೆ. ಈ ವಿಚಾರದಲ್ಲಿ ಸದಾ ನಿಗಾಯಿಡಲಾಗುತ್ತದೆ. ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ಹೈಡ್ರೊಕ್ಸಿಕ್ಲೋರೊಕ್ವಿನ್, ಪೆರಾಸಿಟಾಮೋಲ್ ಮುಂತಾದ ಔಷಧಗಳು ಸಾಕಷ್ಟು ದಾಸ್ತಾನಿದೆ. ಹಾಗೆಯೇ ದೇಶಾದ್ಯಂತವಿರುವ ನಮ್ಮ ಇಲಾಖೆಯ ಜನೌಷಧಿ ಕೇಂದ್ರಗಳಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ಜೀವರಕ್ಷಕ ಔಷಧಗಳು ಲಭ್ಯವಿವೆ. ಕರ್ನಾಟಕ ರಾಜ್ಯವೊಂದರಲ್ಲೇ 600ಕ್ಕಿಂತ ಹೆಚ್ಚು ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಎಂದು ಸದಾನಂದಗೌಡ ಹೇಳಿದರು.

ಔಷಧಗಳ ಕೊರತೆ,  ಕಾಳಸಂತೆಯಂತಹ ಏನಾದರು ದೂರುಗಳಿದ್ದರೆ ನಮ್ಮ ಜನೌಷಧಿ ಸಹಾಯವಾಣಿ ಸಂಖ್ಯೆ 18001808080 ಅಥವಾ ಎನ್.ಪಿ.ಪಿ.ಎ. ಸಹಾಯವಾಣಿ  18001112550, 011-23345118, 011-23345122 ನಂಬರುಗಳಿಗೆ ಕರೆ ಮಾಡಬಹುದು. ಅಥವಾ ಖುದ್ದು ನನ್ನ ಗಮನಕ್ಕೂ ತರಬಹುದು. ಏನೇ ಸಮಸ್ಯೆಯಿದ್ದರೂ ಅದನ್ನು ಇತ್ಯರ್ಥ ಪಡಿಸಲಾಗುವುದು  ಎಂದು ಸಚಿವರು ಭರವಸೆ ನೀಡಿದರು.

ಅದೇ ರೀತಿ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳು ತುರ್ತು ಔಷಧ, ವೈದ್ಯಕೀಯ ಉಪಕರಣಗಳ ಆಮದು ಮಾಡಿಕೊಳ್ಳುವ ವಿಚಾರವಾಗಿ ತೊಡಕುಗಳು ಇದ್ದರೆ ನಮ್ಮ ಇಲಾಖೆಯ ಅಥವಾ ನನ್ನ ಗಮನಕ್ಕೆ ತರಬಹುದು. ಅಗತ್ಯ ಅನುಮತಿಯನ್ನು ಸ್ವಲ್ಪವೂ ವಿಳಂಬವಿಲ್ಲದೆ ದೊರಕಿಸಿ ಕೊಡಲಾಗುವುದು ಎಂದು ಅವರು ಹೇಳಿದರು.

ನಾವ್ಯಾರೂ ಇದುವರೆಗೆ ಕಂಡು ಕೇಳರಿಯದ ಮಹಾಮಾರಿ ಕೊರೋನಾ ರೋಗವು ಜಗತ್ತಿನ ಆರೋಗ್ಯ, ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ನಾವೆಲ್ಲ ಒಟ್ಟಾಗಿ ಸಂಘಟಿತ ಪ್ರಯತ್ನ ಮಾಡಿದಾಗಲೇ ಇದನ್ನು ಮಣಿಸಲು ಸಾಧ್ಯ. ಸಾರ್ವಜನಿಕರೂ ಈ ಹೋರಾಟದಲ್ಲಿ ಕೈಜೋಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ವೈದ್ಯರು ಸೇರಿದಂತೆ ಕೊರೋನಾ ಯೋಧರ ಜತೆ ಎಲ್ಲ ರೀತಿಯಿಂದ ಸಹಕರಿಸಿ ಎಂದು ವಿನಂತಿಸುವುದಾಗಿ ಎಂದು ಸದಾನಂದಗೌಡ ತಿಳಿಸಿದರು.

 

See also  ಬೆಂಗಳೂರಿನಲ್ಲಿ ರಾತ್ರಿ ಒಬ್ಬಂಟಿಯಾಗಿ ತಿರುಗಾಡಲು ಹೆದರುವರು: ಸಮೀಕ್ಷಾ ವರದಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು