News Kannada
Friday, October 07 2022

ಬೆಂಗಳೂರು ನಗರ

ಆರ್‌.ಆರ್‌.ನಗರ, ಶಿರಾ ಉಪಚುನಾವಣೆ ರಂಗು: ಮತದಾನ ಆರಂಭ - 1 min read

Photo Credit :

ಆರ್‌.ಆರ್‌.ನಗರ, ಶಿರಾ ಉಪಚುನಾವಣೆ ರಂಗು: ಮತದಾನ ಆರಂಭ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಉಪ ಚುನಾವಣೆ ಅಂತಿಮ ಘಟ್ಟ ತಲುಪಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾದಲ್ಲಿ ಮತದಾನ ಆರಂಭವಾಗಿದೆ.

ಆರ್​.ಆರ್​.ನಗರದ 678 ಮತಗಟ್ಟೆಗಳಲ್ಲಿ ಮತದಾನ ಶುರುವಾಗಿದ್ದು, ಶಿರಾದ 330 ಮತಗಟ್ಟೆಗಳಲ್ಲೂ ಮತದಾನ ನಡೆಯುತ್ತಿದೆ. ಕೊರೋನಾ ಸೋಂಕು ಆತಂಕದ ನಡುವೆಯೂ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗಳತ್ತ ಬರುತ್ತಿದ್ದಾರೆ.

ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಹಾಗೂ ಸಂಜೆ 5ರಿಂದ ಸಂಜೆ 6 ಗಂಟೆವರೆಗೆ ಸೋಂಕಿತರಿಗೆ ಮತ ಹಾಕಲು ಅವಕಾಶ ನೀಡಲಾಗಿದೆ.

ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತ್ತು ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ನಡುವೆ ಸ್ಪರ್ಧೆ ಇದೆ. ಇನ್ನು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್‍ಗೌಡ, ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ನಡುವೆ ನೇರ ಸ್ಪರ್ಧೆ ಇದೆ.

ಶಿರಾ ಕ್ಷೇತ್ರದಲ್ಲಿ 17 ಅಭ್ಯರ್ಥಿಗಳು ಕಣದಲ್ಲಿದ್ದು, 330 ಮತಗಟ್ಟೆಗಳಿವೆ. ಪುರುಷ ಮತದಾರರು 1 ಲಕ್ಷದ 10 ಸಾವಿರದ 281 ಮಂದಿ ಇದ್ದರೆ, ಮಹಿಳಾ ಮತದಾರರು 1 ಲಕ್ಷದ 5 ಸಾವಿರದ 434 ಮಂದಿ ಇದ್ದು, ಒಟ್ಟು ಮತದಾರರು 2 ಲಕ್ಷದ 15 ಸಾವಿರದ 725 ಮಂದಿ ಇದ್ದಾರೆ. ಆರ್ ಆರ್ ನಗರದಲ್ಲಿ 4 ಲಕ್ಷದ 62 ಸಾವಿರ ಮಂದಿ ಮತದಾರರಿದ್ದಾರೆ.

 

See also  ಮಧುಬಂಗಾರಪ್ಪ ಪಕ್ಷಾಂತರಕ್ಕೆ ಸಮಯ ಗೊತ್ತು: ಡಿಕೆ ಶಿವಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು