News Kannada
Friday, October 07 2022

ಬೆಂಗಳೂರು ನಗರ

ರಾಜ್ಯದಲ್ಲಿ 24ರಿಂದ ಎರಡು ದಿನ ಮಳೆ ಸಾಧ್ಯತೆ - 1 min read

Photo Credit :

ರಾಜ್ಯದಲ್ಲಿ 24ರಿಂದ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ನವೆಂಬರ್ 24ರಿಂದ ಎರಡು ದಿನಗಳವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೋಡ ಮುಸುಕು ಇಲ್ಲದೆ, ಶುಭ್ರ ಆಕಾಶ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಕಂಡುಬರುತ್ತಿದೆ. ಇದರಿಂದಾಗಿ ಮುಂಜಾನೆ ಹೊತ್ತು ಮಂಜು ಕಂಡುಬರುತ್ತಿದೆ. ಸಾಯಂಕಾಲ ಹೊತ್ತು ಕೂಡ ಚಳಿ ಮಂಜು ಇರುತ್ತದೆ.

ಬೆಂಗಳೂರಿನಲ್ಲಿ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಅದು ಸಾಮಾನ್ಯ ತಾಪಮಾನಕ್ಕಿಂತ 0.9 ಡಿಗ್ರಿ ಸೆಲ್ಸಿಯಸ್ ಗಳಷ್ಟು ಕಡಿಮೆಯಾಗಿದೆ. ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಕನಿಷ್ಠ 15.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದು ಸಾಮಾನ್ಯಕ್ಕಿಂತ 1.9 ಡಿಗ್ರಿ ಸೆಲ್ಸಿಯಸ್ ಗಳಷ್ಟು ಕಡಿಮೆಯಾಗಿದೆ.

ಚಂಡಮಾರುತದ ಪರಿಣಾಮ ಹಿಂದೂ ಮಹಾಸಾಗರ ಮತ್ತು ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶಗಳು ಏರ್ಪಟ್ಟಿದ್ದು, ಇದರಿಂದಾಗಿ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 24 ಮತ್ತು 25ರಂದು ಮಳೆಯಾಗುವ ಸಾಧ್ಯತೆಯಿದೆ, ಹೀಗಾಗಿ ಯಲ್ಲೋ ಎಲರ್ಟ್ ಘೋಷಿಸಲಾಗಿದೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕೂಡ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಹೇಳಿದ್ದಾರೆ.

See also  ಕ್ರೆಡಿಟ್, ಡೆಬಿಟ್ ಕಾರ್ಡ್ ಮೂಲಕ ಹೊಸ ವರ್ಷದ ಸಂಭ್ರಮಕ್ಕೆ ಸಜ್ಜಾದ ಸಿಲಿಕಾನ್‌ ಸಿಟಿಯ ಜನತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು