News Kannada
Thursday, September 29 2022

ಬೆಂಗಳೂರು ನಗರ

ಜ.24ಕ್ಕೆ ರಾಷ್ಟ್ರೀಯ ಪ್ರತಿಭಾಶೋಧ ಪರೀಕ್ಷೆ: ಸುರೇಶ್ ಕುಮಾರ್ - 1 min read

Photo Credit :

ಜ.24ಕ್ಕೆ ರಾಷ್ಟ್ರೀಯ ಪ್ರತಿಭಾಶೋಧ ಪರೀಕ್ಷೆ: ಸುರೇಶ್ ಕುಮಾರ್

ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪಿಯು, ಪದವಿ, ಸ್ನಾತಕೋತ್ತರ ಪದವಿ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿ ವೇತನ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಪ್ರತಿಭಾಶೋಧ (ಎನ್‌ಟಿಎಸ್‌) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ಎನ್‌ಸಿಇಆರ್‌ಟಿ ಮಾರ್ಗದರ್ಶನದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಈ ಪರೀಕ್ಷೆ ನಡೆಸಲಿದೆ. ನ.30ಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನ. 2021ರ ಜ.24ಕ್ಕೆ ಪರೀಕ್ಷೆ ನಡೆಯಲಿದೆ ಎಂದು ಹೇಳಿದ್ದಾರೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೆಯೇ ದೂರಶಿಕ್ಷಣದಲ್ಲಿ ಓದುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಅರ್ಜಿಯನ್ನು ಕೆಎಸ್‍ಇಇಬಿ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗಿದೆ. ಶಾಲೆಗಳ ಮುಖ್ಯಶಿಕ್ಷಕರು kseeb.kar.nic.in ವೆಬ್‍ಸೈಟ್ ಮೂಲಕ ಲಾಗಿನ್ ಆಗಿ ತಮ್ಮ ವಿದ್ಯಾರ್ಥಿಗಳ ಅರ್ಜಿಯನ್ನು ಸಲ್ಲಿಸಬಹುದು.

See also  ಐಜಿಪಿ ಅಲೋಕ್ ಕುಮಾರ್ ಗೆ ಜೀವಬೆದರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು