ಬೆಂಗಳೂರು: ಮುಂದಿನ ಬಜೆಟ್ನಲ್ಲಿ ಪೊಲೀಸ್ ಇಲಾಖೆಯ ಆಧುನಿಕರಣಕ್ಕಾಗಿ ₹ 100 ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮಡಿವಾಳದಲ್ಲಿ ನಿರ್ಮಾಣಗೊಂಡಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ ನಿರ್ದೇಶನಾಲಯದ ನೂತನ ಕಟ್ಟಡ ಉದ್ಘಾಟಿಸಿ ಹಾಗೂ ಪೊಲೀಸ್ ಸಮುದಾಯ ಭವನದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯದ ಪೊಲೀಸ್ ವ್ಯವಸ್ಥೆಯು ದೇಶದಲ್ಲೇ ಅತ್ಯುತ್ತಮವಾಗಿದೆ. ಅದನ್ನು ಇನ್ನಷ್ಟು ಶಸಕ್ತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದರು. ಪೊಲೀಸ್ ಇಲಾಖೆಯ ಅಧುನೀಕರಣ ಕಾಲಕಾಲಕ್ಕೆ ನಡೆಯಬೇಕಾಗಿದೆ ಎಂದು ತಿಳಿಸಿದರು.
ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಂಡವರು ದೂರವಾಣಿ ಕರೆ ಮಾಡಿದರೆ ಸಾಕು ತಕ್ಷಣವೇ ಕೇಸು ದಾಖಲಿಸಿಕೊಂಡು ತೊಂದರೆಗೊಳಗಾದವರು ಮತ್ತು ಅಪರಾಧ ಮಾಡಿದವರ ಎರಡೂ ಖಾತೆಗಳನ್ನು ಜಪ್ತಿ ಮಾಡುವ ವಿನೂತನ ಪ್ರಯತ್ನವನ್ನು ರಾಜ್ಯ ಪೊಲೀಸರು ಕೈಗೆತ್ತಿಕೊಂಡಿದ್ದಾರೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.