ಬೆಂಗಳೂರು: ಕೋವಿಡ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯತಿ ಚುನಾವಣೆಗೆ ಕೊನೆಗೂ ದಿನಾಂಕ ಘೋಷಣೆಯಾಗಿದೆ.
ರಾಜ್ಯ ಚುನಾವಣಾ ಆಯೋಗವು ಇಂದು ಸುದ್ದಿಗೋಷ್ಠಿ ನಡೆಸಿ ಗ್ರಾ.ಪಂ.ಚುನಾವಣೆ ನಡೆಯುವ ದಿನಾಂಕವನ್ನು ಘೋಷಿಸಿದೆ. ಮೊದಲ ಹಂತದ ಮತದಾನ ಡಿಸೆಂಬರ್ 22ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. ಡಿಸೆಂಬರ್ 30ರಂದು ಮತಎಣಿಕೆ ನಡೆಯಲಿದೆ.
ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 5762 ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 92,121 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.