News Kannada
Sunday, January 29 2023

ಬೆಂಗಳೂರು ನಗರ

ಗ್ರಾ.ಪಂ. ಚುನಾವಣೆ ಘೋಷಣೆ: ಮಾದರಿ ನೀತಿ ಸಂಹಿತೆ ಜಾರಿ

Photo Credit :

ಗ್ರಾ.ಪಂ. ಚುನಾವಣೆ ಘೋಷಣೆ: ಮಾದರಿ ನೀತಿ ಸಂಹಿತೆ ಜಾರಿ

ಬೆಂಗಳೂರು ಗ್ರಾಮಾಂತರ: ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಟ್ಟು 102 ಗ್ರಾಮ ಪಂಚಾಯಿತಿಗಳ ಪೈಕಿ ಅವಧಿ ಪೂರ್ಣಗೊಳ್ಳದಿರುವ 9 ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ 93 ಗ್ರಾಮ ಪಂಚಾಯಿತಿಗಳಿಗೆ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2020ರ ನವೆಂಬರ್ 30 ರಿಂದ ಡಿಸೆಂಬರ್ 31 ರ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯು ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ನಗರ ಪಾಲಿಕೆ, ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಕೋವಿಡ್-19ರ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಚುನಾವಣೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳು ಹಾಗೂ ನೆಲಮಂಗಲ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 2020ರ ಡಿ.7 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದ್ದು, ಡಿ.11 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿ.12 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಡಿ.14 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ, ಡಿ.22 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದಲ್ಲಿ ಡಿ.24 ರಂದು ಮತದಾನ ನಡೆಯಲಿದೆ. ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿ.31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ 26 ಗ್ರಾಮ ಪಂಚಾಯಿತಿಗಳು ಹಾಗೂ ದೇವನಹಳ್ಳಿ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳಲ್ಲಿ ನಡೆಯಲಿದೆ. 2020ರ ಡಿ.11 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನವಾಗಿದ್ದು, ಡಿ.16 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಡಿ. 17 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದ್ದು, ಡಿ.19 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ, ಡಿ.27 ರಂದು ಬೆಳಿಗ್ಗೆ 7ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದಲ್ಲಿ ಡಿ. 29 ರಂದು ಮತದಾನ ನಡೆಯಲಿದೆ. ಡಿ.30 ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಡಿ.31 ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 04 ತಾಲ್ಲೂಕುಗಳಿದ್ದು, ಒಟ್ಟು 102 ಗ್ರಾಮ ಪಂಚಾಯಿತಿಗಳ ಪೈಕಿ 93 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 799 ಮೂಲ ಮತಗಟ್ಟೆಗಳಿದ್ದು, 87 ಆಕ್ಸಿಲರಿ ಮತಗಟ್ಟೆಗಳು ಸೇರಿದಂತೆ ಒಟ್ಟು 886 ಮತಗಟ್ಟೆಗಳಿವೆ.

See also  ಒಮಿಕ್ರಾನ್ ಸೋಂಕಿತ ವೈದ್ಯ ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆ; ಸಚಿವ ಸುಧಾಕರ್

ಜಿಲ್ಲೆಯಲ್ಲಿ 2,61,776 ಪುರುಷ ಮತದಾರರು, 2,58,831 ಮಹಿಳಾ ಮತದಾರರು ಹಾಗೂ ಇತರೆ ವರ್ಗಕ್ಕೆ ಸೇರಿದ 42 ಮತದಾರರಿದ್ದು, ಒಟ್ಟು 520649 ಮತದಾರರಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು