ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಕಳೆದ ರಾತ್ರಿ ಕಾರ್ಪೊರೇಟರ್ ರಾಕಿಬ್ ಜಾಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು. ಈಗ ಕಾಂಗ್ರೆಸ್ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸುವ ಮೂಲಕ ಮಹತ್ವದ ಬೆಳವಣಿಗೆಯಾಗಿದೆ. ಸಂಪತ್ ರಾಜ್ ಗಲಭೆ ಪ್ರಕರಣದ ಪ್ರಮುಖ ಆರೋಪಿ ಎಂದು ತನಿಖೆ ವೇಳೆ ತಿಳಿದುಬಂದಿದೆ.
ರಾಕಿಬ್ ಜಾಕೀರ್ ಪುಲಕೇಶಿನಗರ ವಾರ್ಡ್ ನ ಮಾಜಿ ಕಾರ್ಪೊರೇಟರ್. ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ರಾಕಿಬ್ ಪ್ರಮುಖ ಆರೋಪಿಯಾಗಿದ್ದು, ಸಿಸಿಬಿ ಪೊಲೀಸರು ಈತನಿಗೆ ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದರು. ಒಂದು ಬಾರಿ ವಿಚಾರಣೆಗೆ ಹಾಜರಾಗಿದ್ದ ಈತ ತಲೆ ಮರೆಸಿಕೊಂಡಿದ್ದ. ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ