ಬೆಂಗಳೂರು: ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ ೩ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಚಾಲನೆ ನೀಡಿದರು.
ರಾಜ್ಯದಲ್ಲಿ ಕೊವ್ಯಾಕ್ಸಿನ್ ಲಸಿಕೆ ಯಶಸ್ವಿಯಾಗುವ ನೀರಿಕ್ಷೆಯಿದೆ. ಲಸಿಕೆಯ ವಿತರಣೆಗೆ ಎಲ್ಲ ರೀತಿದ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.