ಬೆಂಗಳೂರು: ಹಲವಾರು ಚರ್ಚೆ ವಾದ ವಿವಾದಗಳಿಗೆ ಎಡೆಯಾಗಿರುವ ಸಂಪುಟ ವಿಸ್ತರಣೆಯ ವಿವಾದಕ್ಕೆ ಒಂದು ಕೊನೆ ಸಿಗುವ ಸಾಧ್ಯತೆ ಕಾಣುತ್ತಿದೆ. ಬಿಜೆಪಿ ಕೇಂದ್ರ ನಾಯಕರು ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸುವರಿದ್ದಾ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿದೆ.
ಮುನಿರತ್ನ , ಆರ್ .ಶಂಕರ್, ಎಂಟಿಬಿ ನಾಗರಾಜ್, ಸಿಪಿ ಯೋಗೇಶ್ವರ್ ಮತ್ತು ಉಮೇಶ್ ಕತ್ತಿ ಅವರ ಹೆಸರುಗಳು ಸಂಪುಟಕ್ಕೆ ಸೇರಲಿವೆ ಎಂಬ ಮಾತುಗಳು ಕೇಳಿಬರುತ್ತಿದೆ.
ಸಂಪುಟ ವಿಸ್ತರಣೆ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂಕೆ 10 ಸದಸ್ಯರಸು ಶುಕ್ರವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದರು. ಅದರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಆರ್. ಅಶೋಕ, ಈಶ್ವರಪ್ಪ, ಸಿಟಿ ರವಿ ಹಾಗೂ ಅರವಿಂದ ಲಿಂಬಾವಳಿ ಪಾಲ್ಗೊಂಡಿದ್ದರು.