News Kannada
Wednesday, November 30 2022

ಬೆಂಗಳೂರು ನಗರ

ಹವಾನಿಯಂತ್ರಿತ ವಾಯುವಜ್ರ ಬಸ್‍: ಮುಂಗಡ ಬುಕ್ಕಿಂಗ್ ಸೇವೆ ಆರಂಭ - 1 min read

Photo Credit :

ಹವಾನಿಯಂತ್ರಿತ ವಾಯುವಜ್ರ ಬಸ್‍: ಮುಂಗಡ ಬುಕ್ಕಿಂಗ್ ಸೇವೆ ಆರಂಭ

ಬೆಂಗಳೂರು: ಹವಾನಿಯಂತ್ರಿತ ವಾಯುವಜ್ರ ಬಸ್‍ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಮುಂಗಡ ಬುಕ್ಕಿಂಗ್ ಸೇವೆ ಪುನಾರಂಭಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ನಗರದ ವಿವಿಧ ಸ್ಥಳಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (164 ಟ್ರಿಪ್) ಹಾಗೂ ಕೆಂಪೇಗೌಡ ಅಂತರ್‍ರಾಷ್ಟ್ರಿಯ ವಿಮಾನ ನಿಲ್ದಾಣದಿಂದ ನಗರದ ವಿವಿಧ ಸ್ಥಳಗಳಿಗೆ (171 ಟ್ರಿಪ್) ಪ್ರತಿನಿತ್ಯ ಒಟ್ಟು 335 ಏಕಮುಖ ಟ್ರಿಪ್ ಮೂಲಕ ಹವಾನಿಯಂತ್ರಿತ ವಾಯುವಜ್ರ ಬಸ್‍ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಕೋವಿಡ್ ಸಾಂಕ್ರಾಮಿಕ ಹಿನ್ನಲೆಯಲ್ಲಿ ಬಸ್ ನಲ್ಲಿ ಟಿಕೆಟ್ ನೀಡುವಿಕೆಯನ್ನು ಸ್ಥಗಿತಗೊಳಿಸಲಾಗಿದ್ದು, ಮುಂಗಡವಾಗಿ ಆಸನಗಳನ್ನು ಕೆಎಸ್ಆರ್‌ಟಿಸಿ ಬುಕ್ಕಿಂಗ್ ಕೌಂಟರ್ ಗಳು, ಆನ್‍ಲೈನ್ www.ksrtc.in ಕೆಎಸ್ಸಾರ್ಟಿಸಿ ಮೊಬೈಲ್ ಆಪ್ ಹಾಗೂ ಅಧಿಕೃತ ಖಾಸಗಿ ಏಜೆನ್ಸಿಗಳ ಮೂಲಕ ಕಾಯ್ದಿರಿಸಬಹುದು. ಪ್ರಯಾಣಿಕರು ಪ್ರಯಾಣಿಸುವ ಸಮಯದಲ್ಲಿ ಚಾಲ್ತಿಯಲ್ಲಿರುವ ಮುದ್ರಿತ ಟಿಕೆಟ್, ಇ-ಟಿಕೇಟ್, ಬುಕ್ಕಿಂಗ್ ಎಸ್‍ಎಂಎಸ್ ಹೊಂದಿರಬೇಕು ಎಂದು ಬಿಎಂಟಿಸಿ ಹೇಳಿದೆ.

ಒಂದೇ ಗುಂಪಿನ 4 ಅಥವಾ ಅಧಿಕ ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿದಲ್ಲಿ, ಪ್ರಯಾಣದರದಲ್ಲಿ ಶೇ.5 ರಷ್ಟು ರಿಯಾಯಿತಿಯನ್ನು ಇ-ಬುಕ್ಕಿಂಗ್ ಸಮಯದಲ್ಲಿ ನೀಡಲಾಗುತ್ತದೆ. ಪ್ರಯಾಣ ಆರಂಭಿಸುವ ಹಾಗೂ ಹಿಂದಿರುಗುವ ಪ್ರಯಾಣಕ್ಕೆ ಒಮ್ಮೆಲೇ ಮುಂಗಡವಾಗಿ ಆಸನವನ್ನು ಕಾಯ್ದಿರಿಸಿದಲ್ಲಿ, ಹಿಂದಿರುಗುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿಯನ್ನು ಇ-ಬುಕ್ಕಿಂಗ್ ಸಮಯದಲ್ಲಿ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

See also  ಇಂದಿರಾ ಗಾಂಧಿ ಕ್ಯಾಂಟೀನ್ ಉದ್ಘಾಟನೆಗೆ ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು