ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಈ ವೇಳೆ ಸರ್ಕಾರದ ಹಲವು ವೈಫಲ್ಯಗಳನ್ನು ಸಭೆಯಲ್ಲಿ ಎತ್ತಿ ಹಿಡಿಯಲು ವಿರೋಧ ಪಕ್ಷಗಳು ಸಜ್ಜಾಗಿವೆ.
ಏಳು ದಿನಗಳ ಕಾಲ ನಡೆಯಲಿರುವ ಅಧಿವೇಶನ ಡಿ. 15ಕ್ಕೆ ಮುಕ್ತಾಯವಾಗಲಿದೆ. ಈ ಬಾರಿಯ ಚಳಿಗಾಲದ ಅಧಿವೇಶನ ಸಾಕಷ್ಟು ಬಿಸಿಬಿಸಿ ಚರ್ಚೆಗೆ ಕಾರಣವಾಗಲಿದೆ.
ಈ ನಡುವೆ ಸದನದಲ್ಲಿ ರೈತರಿಗೆ ಸಂಬಂಧಿಸಿದ ವಿಚಾರಗಳು ಹಾಗೂ ಪ್ರವಾಹಪೀಡಿತರ ವಿಚಾರಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಹರಿಹಾಯಲು ಜೆಡಿಎಸ್ ಕೂಡ ಸಜ್ಜುಕೊಂಡಿದೆ.