ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೋವಿಡ್-19 ಟಾಸ್ಕ್ ಫೋರ್ಸ್ ನ ನೇತೃತ್ವ ನೀಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾಗಿ ಕಾರಜೋಳ ಅವರನ್ನು ನೇಮಕ ಮಾಡಲಾಗಿದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಗಣಿ ಸಚಿವ ಸಿಸಿ ಪಾಟೀಲ್ ಅವರನ್ನು ಕೋವಿಡ್-19 ಟಾಸ್ಕ್ ಫೋರ್ಸ್ ನ ಸದಸ್ಯರನ್ನಾಗಿ ಮಾಡಲಾಗಿದೆ.
ಈ ಸಮಿತಿಯು ರಾಜ್ಯದಲ್ಲಿ ಕೋವಿಡ್-19ಗೆ ಸಂಬಂಧಿಸಿದಂತಹ ಎಲ್ಲಾ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಜನವರಿ-ಫೆಬ್ರವರಿಯಲ್ಲಿ ಕೋವಿಡ್-19 ಎರಡನೇ ಅಲೆ ಬರುವ ಹಿನ್ನೆಲೆಯಲ್ಲಿ ಸಮಿತಿಯನ್ನು ಸಂಘಟಿಸಲಾಗಿದೆ.
ಯಾವುದೇ ಪರಿಸ್ಥಿತಿಯನ್ನು ಎದುರಿಸಲು ರಾಜ್ಯದಲ್ಲಿ ಪ್ರಮುಖ ಆಸ್ಪತ್ರೆಗಳಲ್ಲಿ ಬೆಡ್ ಸೌಲಭ್ಯವನ್ನು ಒದಗಿಸಲು ನಿರ್ಧರಿಸಲಾಗಿದೆ.