ಬೆಂಗಳೂರು: ಸಾರಿಗೆ ನೌಕರರ ಮುಷ್ಕರವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿಎಸ್ ವೈ ಅವರ ನೇತೃತ್ವದಲ್ಲಿ ಭಾನುವಾರ ಮಧ್ಯಾಹ್ನ ಸಭೆ ನಡೆಯಿತು.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಈ ಸಭೆಯಲ್ಲಿ ಸಾರಿಗೆ ಸಚಿವರಾಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ) ಅಧ್ಯಕ್ಷ ಚಂದ್ರಪ್ಪ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ, ಸಾರಿಗೆ ಆಯುಕ್ತ ಶಿವಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.
ಸಭೆ ಮುಕ್ತಾಯಗೊಂಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಅವರು ಅಂತಿಮ ನಿರ್ಧಾರವನ್ನು ತಿಳಿಸುವುದಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.