ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಸಂಜೆ ವೇಳೆ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರನ್ನು ಭೇಟಿ ಮಾಡಿದರು.
ಇಬ್ಬರು ನಾಯಕರು ತುಂಬಾ ಖಾಸಗಿಯಾಗಿ ಮಾತುಕತೆ ನಡೆಸಿದ್ದು, ಇದಕ್ಕೆ ಮೊದಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಬ್ರಾಹಿಂ ಅವರನ್ನು ಭೇಟಿ ಮಾಡಿ ಜೆಡಿಎಸ್ ಗೆ ಆಹ್ವಾನಿಸಿದ್ದರು.
ಸಿದ್ದರಾಮಯ್ಯ ಜತೆಗೆ ಮುನಿಸಿಕೊಂಡಿರುವ ಇಬ್ರಾಹಿಂ ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವರು ಎಂದು ಹೇಳಲಾಗಿದೆ. ಇಬ್ರಾಹಿಂ ಅವರನ್ನು ಭೇಟಿ ಮಾಡಿದ ಡಿಕೆಶಿ, ಪಕ್ಷ ತ್ಯಜಿಸದಂತೆ ಮನವಿ ಮಾಡಿರುವರು ಎಂದು ತಿಳಿದುಬಂದಿದೆ.