ಬೆಂಗಳೂರು: ರಾಜ್ಯದಲ್ಲಿ ಸುಮಾರು 71 ಸಾವಿರ ಶಿಕ್ಷಕರು ಒಂದು ಶಾಲೆಯಿಂದ ಮತ್ತೊಂದು ಶಾಲೆಗೆ ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಸುಮಾರು ಮೂವತ್ತು ಸಾವಿರ ಶಿಕ್ಷಕರು ವರ್ಗಾವಣೆ ನಿರೀಕ್ಷೆಯಲ್ಲಿರುವರು.
ಈ ಬಗ್ಗೆ ರಾಜ್ಯ ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಸುಮಾರು 48,315 ಮಂದಿ ಒಂದೇ ಜಿಲ್ಲೆಯಲ್ಲಿ ವರ್ಗಾವಣೆ ಬಯಸಿರುವರು. ಮೊದಲ ಬಾರಿಗೆ ಶಿಕ್ಷಕ ಮಿತ್ರ ಆಪ್ ಮೂಲಕ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ವರ್ಗಾವಣೆಯನ್ನು ಶೇ.5ರಿಂದ 11ಕ್ಕೆ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ಈ ವರ್ಷ ಅರ್ಜಿ ಸಂಖ್ಯೆಯು ಹೆಚ್ಚಾಗಿದೆ ಎಂದು ಅವರು ಹೇಳಿದರು.