ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪೊಲೀಸ್ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ದಾಖಲಾಗಿದ್ದು ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ಹತ್ತು ವರ್ಷಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುರೇಶ್ ಮತ್ತು ಶೀಲಾ ಒಟ್ಟಿಗೆ ಇಂದು ಆತ್ಮಹತ್ಯೆ ಮಾಡಿಕೊಂಡಿರುವುದು ರ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುರೇಶ್ ಅವರು ಬಾಗಲೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದು, ಆತ್ಮಹತ್ಯೆ ಹಿಂದಿನ ಸ್ಪಷ್ಟ ಕಾರಣ ಇನ್ನು ತಿಳಿದಿಲ್ಲ ಎಂದು ಹೇಳಿದರು.