ಬೆಂಗಳೂರು: ಬೆಂಗಳೂರಿನಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಹಾಗೂ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟಕ್ಕೆ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಮಾಡುವಂತೆ ಕೋರಿ ಬೆಂಗಳೂರಿನಲ್ಲಿ ಸೋಮವಾರ ಮತ್ತೊಂದು ಬಂದ್ ನಾ ಸಾಧ್ಯತೆ.
ದೇಶದಲ್ಲೆಡೆ ನಡೆಯುತ್ತಿರುವ ಪ್ರತಿಭಟನೆಗೆ ಸಾಥ್ ನೀಡುವಂತೆ ಬೆಂಗಳೂರಿನ ಯಶವಂತಪುರ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟ ಸೋಮವಾರ ಬಂದ್ ಗೆ ಕರೆನೀಡಿದ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ನಡೆಯಲಿದ್ದು, ಎಪಿಎಂಸಿ ಯಾರ್ಡ್ನಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಕೂಲಿ ಕಾರ್ಮಿಕರು, ಅಮಾಲಿಗಳು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಈ ಬಗ್ಗೆ ಮಾತನಾಡಿದ ರಾಜ್ಯ ಎಪಿಎಂಸಿ ಯಾರ್ಡ್ ಕಾರ್ಮಿಕ ಒಕ್ಕೂಟದ ಅಧ್ಯಕ್ಷ ಅರುಣ್ ಪರಮೇಶ್ವರ್, “ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರಗಳನ್ನು ಹಾಗೂ ನಮ್ಮ ಬೇಡಿಕೆಗಳನ್ನು ಪೂರೈಸಲು ಒಪ್ಪುವ ತನಕ ಮುಷ್ಕರ ಮುಂದುವರೆಯುತ್ತದೆ ಎಂದು ಬಂದ್ ಪ್ರಾರಂಭಿಸುವ ಮುನ್ನವೇ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.