ಬೆಂಗಳೂರು: ಕರ್ತವ್ಯದ ಸಮಯದಲ್ಲಿ ಪೊಲೀಸರಿಗೆ ಬಾಡಿ ಕ್ಯಾಮೆರಾ ದರಿಸುವುದು ಕಡ್ಡಾಯ ಎಂದು ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬಾಡಿ ಕ್ಯಾಮೆರಾ ಧರಿಸುವ ಮೂಲಕ ಪೊಲೀಸ್ ಸಿಬ್ಬಂದಿ ಗಳಿಂದಾಗುವ ಭ್ರಷ್ಟಾಚಾರವನ್ನು ತಡೆಯಬಹುದು. ಇದರ ಮೂಲಕ ಕರ್ತವ್ಯನಿರತ ಪೊಲೀಸರು ಕಡ್ಡಾಯವಾಗಿ ಬಾಡಿ ಕ್ಯಾಮೆರಾ ಧರಿಸಲು ನಿರ್ದೇಶಿಸಲು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧಾರಿಸಿದಂತೆಯೂ ಆಗುತ್ತದೆಷಎಂದು ಹೈಕೋರ್ಟ್ ತಿಳಿಸಿದೆ.
2020ರ ಸೆಪ್ಟೆಂಬರ್ 10ರಂದು ನಗರ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು,ಬೆಂಗಳೂರು ನಗರದಲ್ಲಿ ಕರ್ತವ್ಯನಿರತ ಪೊಲೀಸರು ಸಮವಸ್ತ್ರಕ್ಕೆ ಅಳವಡಿಸಿಕೊಳ್ಳಲು 75 ಲಕ್ಷ ರು. ವೆಚ್ಚದಲ್ಲಿ 50 ಬಾಡಿ ಕ್ಯಾಮೆರಾ ಖರೀದಿಸಲಾಗಿದೆ. ಬಳಕೆ ಮಾಡಿಲ್ಲ ಎಂದು ಹೇಳಲಾಗಿತ್ತು. ಆದರೆ ಈವರೆಗೂ ಸಲ್ಲಿಸಿದ ಮನವಿಯನ್ನು ಪರಿಗಣಿಸಿಲ್ಲ’ ಎಂದು ಹೇಳಲಾಗುತ್ತಿದೆ.
ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ, ಬೆಂಗಳೂರಿನ ವಕೀಲೆ ಗೀತಾ ಮಿಶ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ಪ್ರತಿವಾದಿಗಳಾದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ನಗರ ಪೊಲೀಸ್ ಆಯುಕ್ತ ಮತ್ತು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.