ಬೆಂಗಳೂರು: ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡುವಂತೆ ಆಲೋಚನೆಗಳು ನಡೆಯುತ್ತಿದ್ದು, ಈ ಬಗ್ಗೆ ರಾಜಕೀಯ ನಾಯಕರುಗಳಲ್ಲೇ ನಿನ್ನ ಮಾತುಗಳು ಕೇಳಿಬರುತ್ತಿದೆ. ಕರ್ಫ್ಯೂ ಜಾರೀ ಮಾಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದ ಬೆನ್ನಲ್ಲೇ, ಇದೀಗ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಕರ್ಫ್ಯೂ ಜಾರಿಗೊಳ್ಳುವುದರ ಬಗ್ಗೆ ಸುಳಿವನ್ನು ನೀಡಿದ್ದಾರೆ.
ಹೊಸ ವೈರಸ್ ಬಗ್ಗೆಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ಆದ್ದರಿಂದ ನೈಟ್ ಕರ್ಫ್ಯೂ ವಿಧಿಸುವ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸಬೇಕು ಎಂದು ಸಚಿವ ಸುಧಾಕರ್ ಹೇಳಿದರು.
ಈಗಾಗಲೇ ಪಂಜಾಬ್ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿ ಗೊಂಡಿದ್ದು, ಕರ್ನಾಟಕದಲ್ಲಿಯೂ ಜಾರಿಗೊಳ್ಳುವ ಸಾಧ್ಯತೆ ಇದೆ ಎಂಬುದು ಎಲ್ಲರ ಶಂಕೆಯಾಗಿದೆ.